HomeKarnatakaಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಸವಾಲು ಹಾಕಿದ್ದಾರೆ.

ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಬಿಜೆಪಿ ಅಭ್ಯರ್ಥಿ ಬದಲಾಯಿಸುವಂತೆ ಮಾಜಿ ಸಚಿವರಾದ ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ಎಸ್.ಎ. ರವೀಂದ್ರನಾಥ್ ಬಣ ಒತ್ತಾಯಿಸಿದೆ. ಈ ನಡುವೆ ಬಸವರಾಜ್ ಶಿವಗಂಗಾ ಅವರು ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸವಾಲು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular