HomeKarnatakaಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ

ಹಾವೇರಿ: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ನಿಮಿತ್ತ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಸತೀಶ್ ಕುಲಕರ್ಣಿ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ.

ಆದರೆ, ಗೌರವ ಡಾಕ್ಟರೇಟ್ ಸ್ವೀಕರಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ.

ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ. ಮತ್ತೊಮ್ಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular