HomeLatest NewsBIG NEWS: ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

BIG NEWS: ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ನಿನ್ನೆಯಷ್ಟೇ ಸಿಎಂ ಅಧಿಕಾರ ಹಸ್ತಾಂತರ ಕುರಿತು ಹೇಳಿಕೆ ನೀಡಿ ಚರ್ಚೆಗೆ ಕಾರಣರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular