HomeKarnatakaBIG NEWS: ಬೆಂಗಳೂರಿನಲ್ಲಿ ಅನಧಿಕೃತ, ನಕ್ಷೆ ಉಲ್ಲಂಘಿಸಿದ ಕಟ್ಟಡಗಳ ತೆರವಿಗೆ ಆದೇಶ

BIG NEWS: ಬೆಂಗಳೂರಿನಲ್ಲಿ ಅನಧಿಕೃತ, ನಕ್ಷೆ ಉಲ್ಲಂಘಿಸಿದ ಕಟ್ಟಡಗಳ ತೆರವಿಗೆ ಆದೇಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಮಂಜೂರಾಗುವ ಕಟ್ಟಡ ನಕ್ಷೆಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ನಕ್ಷೆ ಮಂಜೂರಾದ 30 ದಿನಗಳೊಳಗೆ ಕಟ್ಟಡ ಮಾಲೀಕರು ಅಥವಾ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ʼಬಿಲ್ಡಿಂಗ್‌ ಪ್ಲಿಂಥ್‌ ಲೈನ್‌ʼ ಅನ್ನು ನಗರ ಯೋಜನೆ ಅಧಿಕಾರಿಗಳು ಗುರುತು ಮಾಡಿಕೊಡಬೇಕು. ಅದನ್ನು ಕೇಂದ್ರ ಹಾಗೂ ವಲಯ ಕಚೇರಿಯ ಜಂಟಿ ನಿರ್ದೇಶಕರು ದೃಢೀಕರಿಸಬೇಕು.

ವಾರ್ಡ್‌ನಲ್ಲಿ ಕಿರಿಯ, ಸಹಾಯಕ ಎಂಜಿನಿಯರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಕಾರ್ಯಪಾಲಕ ಎಂಜಿನಿಯರ್‌ಗಳು ಮಂಜೂರಾದ ನಕ್ಷೆಯ ವಿವರ ಪಡೆದುಕೊಂಡು ಅದರ ಅನುಸಾರ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿರುವುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular