ಬೆಂಗಳೂರು : ಮರದ ಕೊಂಬೆ ಬಿದ್ದು ಮೃತಪಟ್ಟ ಅಕ್ಷಯ್ ಕುಟುಂಬಕ್ಕೆ ಬಿಬಿಎಂಪಿ 5 ಲಕ್ಷ ಪರಿಹಾರದ ಚೆಕ್ ವಿತರಿಸಿದೆ.
ಮರದ ಕೊಂಬೆ ಬಿದ್ದು ಬ್ರೈನ್ ಡೆಡ್ ಆಗಿ ಮೃತಪಟ್ಟಅಕ್ಷಯ್ ಕುಟುಂಬಕ್ಕೆ ಬಿಬಿಎಂಪಿ 5 ಲಕ್ಷ ರು. ಮೊತ್ತದ ಪರಿಹಾರದ ಚಕ್ ಶುಕ್ರವಾರ ವಿತರಣೆ ಮಾಡಿದೆ. ಆದರೆ ಹೆಚ್ಚಿನ ಮೊತ್ತದ ಪರಿಹಾರ ನೀಡುವಂತೆ ಅಕ್ಷಯ್ ಕುಟಂಬ ಸದಸ್ಯರ ಮನವಿ ಮಾಡಿದ್ದಾರೆ.
ಕಳೆದ ಭಾನುವಾರ ಶ್ರೀನಗರದ ನಿವಾಸಿ ಅಕ್ಷಯ್ (29) ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮರದ ಕೊಂಬೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡಿದ್ದರು. ಆದರೆ ಗುರು ವಾರಚಿಕಿತ್ಸೆಫಲಕಾರಿಯಾಗದೇಮೃತಪಟ್ಟಿ ದ್ದರು.
ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ವಲಯ ಆಯುಕ್ತ ದಿಗ್ವಿಜಯ್ ಬೋಡ್ಕೆ ಅಕ್ಷಯ್ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗಿದ್ದು, ಈಗಾಗಲೇ 4 ಲಕ್ಷ ಆಸ್ಪತ್ರೆ ಬಿಲ್ ಪಾವತಿ ಮಾಡಲಾಗಿದೆ. ಹೆಚ್ಚಿನ ಪರಿಹಾರ ನೀಡಲು ನಮಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ ಎಂದು ಹೇಳಿದರು.
You Might Also Like
TAGGED:BBMP