BIG NEWS: ಸ್ನೇಹಿತನಿಂದಲೇ ಕೊಲೆಯಾದ ಬಿಬಿಎಂಪಿ ಸಿಬ್ಬಂದಿ; ಆರೋಪಿ ಅರೆಸ್ಟ್

ಬೆಂಗಳೂರು: ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಿಬಿಎಂಪಿ ಸಿಬ್ಬಂದಿಯನ್ನು ಆತನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.

ಭರತ್ (26) ಕೊಲೆಯಾದ ದುರ್ದೈವಿ. ಆರೋಪಿ 29 ವರ್ಷದ ಪ್ರಭು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆಟೋ ಚಾಲಕನಾಗಿದ್ದಾನೆ.

ಪ್ರಭು ಹಾಗೂ ಕೆಲ ಸ್ನೇಹಿತರು ಪಂತರಪಾಳ್ಯ ಬಳಿ ಸೋಮವಾರ ಮಧ್ಯರಾತ್ರಿ ಭರತ್ ನನ್ನು ನೋಡಲು ಹೋಗಿದ್ದರು. ಈ ವೇಳೆ ಭರತ್ ಹಾಗೂ ಪ್ರಭು ನಡುವೆ ಮಾತಿಗೆ ಮಾತು ಬೆಳೆದು ವಾಗ್ವಾದ ಶುರುವಾಗಿದೆ. ಕೋಪದ ಬರದಲ್ಲಿ ಪ್ರಭು, ಭರತ್ ನ ಕತ್ತು ಹಾಗೂ ದೇಹದ ಮೇಲೆ ಹರಿತವಾದ ವಸ್ತುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಭರತ್ ಮೃತಪಟ್ಟಿದ್ದಾನೆ. ಬ್ಯಾಟರಾಯನಪುರ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 302ರ ಅಡಿ ಕೊಲೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read