ಬೆಂಗಳೂರು: ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಂಡಿದ್ದ ಬಿಬಿಎಂಪಿ ಐವರು ನೌಕರರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತರು ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್ ಪಡೆದಿದ್ದಾರೆ. ಪರಿಶಿಷ್ಠ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಐವರು ನೌಕರರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಮುಖ್ಯ ಆಯುಕ್ತರು ಐವರು ನೌಕರರ ಅಮಾನತು ಆದೇಶ ಹಿಂಪಡೆದಿದ್ದಾರೆ.