HomeKarnatakaBREAKING NEWS: ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

BREAKING NEWS: ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ.

ಬೈಕ್ ಗೆ ಡಿಕ್ಕಿ ಹೊಡೆದ ಕಸದ ಲಾರಿ ಸವಾರರ ಮೇಲೆ ಹರಿದು ಹೋಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಮೃತ ದುರ್ದೈವಿಗಳು.

ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular