HomeKarnatakaBREAKING NEWS: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ದುರಂತ: 10 ವರ್ಷದ ಬಾಲಕ ಸಾವು

BREAKING NEWS: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ದುರಂತ: 10 ವರ್ಷದ ಬಾಲಕ ಸಾವು

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ.

ಗೇಟ್ ಬಿದ್ದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿರಂಜನ್ ಮೃತ ಬಾಲಕ. ಆಟವಾಡಲೆಂದು ಮೈದಾನಕ್ಕೆ ಬಂದಿದ್ದ ಬಾಲಕ ಗೇಟ್ ತೆಗೆಯುತ್ತಿದ್ದಂತೆಯೇ ಆತನ ಮೈಮೇಲೆ ಗೇಟ್ ಬಿದ್ದಿದೆ. ಬಿಬಿಎಂಪಿ ಬೇಜವಾಬ್ದಾರಿಗೆ ಬಾಲಕ ಬಲಿಯಾಗಿದ್ದಾನೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular