ಬೆಂಗಳೂರು: ಇಂದಿರಾ ಕ್ಯಾಂಟೀನ್ ನ ಕೋಟ್ಯಂತರ ರೂಪಾಯಿ ಅವ್ಯಹಾರ ಪ್ರಕರಣಕ್ಕೆ ಸಂಬಧಿಸಿದಂತೆ ಬೆಂಗಳೂರು ದಕ್ಷಿಣ ಉಪ ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಡಾ.ಕಲ್ಪನಾ.ಪಿ ಅಮಾನತುಗೊಂಡಿರುವ ಆರೋಗ್ಯಾಧಿಕಾರಿ. ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ ನೀಡಬೇಕಿದ್ದ 2,27,34,474 ರೂ ಬದಲಾಗಿ ಪರಿಶೀಲನೆ ನಡೆಸದೇ 9,72,21,787 ರೂ ಗಳನ್ನು ಪಾವತಿಸಿದ್ದಾರೆ.
ಆರೋಗ್ಯಾಧಿಕಾರಿಯ ನಿರ್ಲಕ್ಷ್ಯದಿಂದಾಗಿ ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ 7,00,12,396 ರೂ ಅಧಿಕ ಮೊತ್ತ ಪಾವತಿಯಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅವರನ್ನು ಬಿಬಿಎಂಪಿ ವಿಶೇಶ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.