HomeKarnatakaBBMP ಕಾಮಗಾರಿ ಅಕ್ರಮ; ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

BBMP ಕಾಮಗಾರಿ ಅಕ್ರಮ; ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

ಬೆಂಗಳೂರು: ಬಿಬಿಎಂಪಿ ಕಾಮಗಾರಿಯಲ್ಲಿ ನಡೆದ ಅಕ್ರಮ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

2019-20ನೇ ಸಾಲಿನಿಂದ 2022-23ನೇ ಸಾಲಿನವರೆಗೆ ನಡೆದ ಕಾಮಗಾರಿಗಳ ಅಕ್ರಮ, ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದರರಿಗೆ ಹಣ ಪಾವತಿ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ನಕಲಿ ಬಿಲ್ ಸೃಷ್ಟಿ ಸೇರಿದಂತೆ ವಿವಿಧ ಪ್ರಕರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘನತ್ಯಾಜ್ಯ ನಿರ್ವಹಣೆ ಕಾಮಗಾರಿ ಅಕ್ರಮ ತನಿಖೆಗೆ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿ ಅಕ್ರಮದ ತನಿಖೆಗೆ ಆಮ್ಲನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ, ಬೃಹತ್ ನೀರುಗಾಲುವೆ ಅಕ್ರಮ ತನಿಖೆಗೆ ಪಿ.ಸಿ ಜಾಫರ್ ಅಧ್ಯಕ್ಷತೆಯಲ್ಲಿ, ಕೆರೆ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಗೆ ಡಾ. ವಿಶಾಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular