HomeKarnatakaBREAKING: BBMP ಕಚೇರಿ ಅಗ್ನಿ ಅವಘಡ: ಮೂವರು ನೌಕರರ ಸ್ಥಿತಿ ಗಂಭೀರ

BREAKING: BBMP ಕಚೇರಿ ಅಗ್ನಿ ಅವಘಡ: ಮೂವರು ನೌಕರರ ಸ್ಥಿತಿ ಗಂಭೀರ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ 9 ಜನರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ನಿರ್ದೇಶಕ ಡಾ. ರಮೇಶ್ ಕೃಷ್ಣ ಹೇಳಿದ್ದಾರೆ.

ಡಯಾಲಿಸಿಸ್ ಪೇಷಂಟ್ ಕಿರಣ್ ಸ್ಥಿತಿ ಗಂಭೀರವಾಗಿದೆ. ನಿನ್ನೆ ಡಯಾಲಿಸಿಸ್ ಮಾಡಲಾಗಿತ್ತು. ಮತ್ತೆ ಮಾಡುವಂತೆ ಸೂಚನೆ ನೀಡಲಾಗಿದೆ. ಜ್ಯೋತಿ ಮುಖಕ್ಕೆ ಹೆಚ್ಚು ಹಾನಿಯಾಗಿದೆ. ಆದರೆ, ಸ್ಟೇಬಲ್ ಆಗಿದ್ದಾರೆ. 9 ಗಾಯಾಳುಗಳ ಪೈಕಿ ಶಿವಕುಮಾರ್ ಮತ್ತು ಜ್ಯೋತಿ ಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯದ ಮೇಲೆ ಇನ್ನೂ ನಾಲ್ಕು ದಿನ ನಿಗಾವಹಿಸುವ ಅಗತ್ಯವಿದೆ. ಉಳಿದ ಆರು ಗಾಯಾಳುಗಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ರಮೇಶ್ ಕೃಷ್ಣ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular