HomeKarnatakaBIG NEWS: ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ತೆರವಿಗೆ BBMP ಆದೇಶ

BIG NEWS: ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ತೆರವಿಗೆ BBMP ಆದೇಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.

ಫ್ಲೆಕ್ಸ್, ಬ್ಯಾನರ್ ಬಗ್ಗೆ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದ ಬೆನ್ನಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ದ್ವಜಗಳನ್ನು ತೆರವು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಧ್ವಜಗಳನ್ನು ತೆರವು ಮಾಡುವಂತೆ ತಿಳಿಸಿದೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular