HomeKarnatakaಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ.

ಅಸ್ತಿ ತೆರಿಗೆ ಪೂರ್ಣ ಪಾವತಿಸುವವರಿಗೆ ರಿಯಾಯಿತಿ ಅವಧಿಯನ್ನು ಜೂನ್ 30ರವರೆಗೆ ಸರ್ಕಾರ ವಿಸ್ತರಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಿಯಾಯಿತಿಯನ್ನು ಏಪ್ರಿಲ್ 30ಕ್ಕೆ ಅಂತ್ಯಗೊಳಿಸಲಾಗಿತ್ತು. ತೆರಿಗೆದಾರರಿಗೆ ಅನುಕೂಲವಾಗುವಂತೆ ಮತ್ತು ಬಿಬಿಎಂಪಿ ಆರ್ಥಿಕ ಹಿತದೃಷ್ಟಿಯಿಂದ ರಿಯಾಯಿತಿ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular