HomeKarnatakaಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: 225 ವಾರ್ಡ್ ಗಳ ಪಟ್ಟಿ ಪ್ರಕಟ

ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: 225 ವಾರ್ಡ್ ಗಳ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 225 ವಾರ್ಡ್ ಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಮೊದಲು 198 ಇದ್ದ ವಾರ್ಡ್ ಗಳ ಸಂಖ್ಯೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ 243ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿತ್ತು.

ಈ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಾರ್ಡ್ ಗಳ ಸಂಖ್ಯೆಯನ್ನು 225 ಕ್ಕೆ ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಈಗ ವಾರ್ಡ್ ಗಳ ಪಟ್ಟಿ ಪ್ರಕಟಿಸಲಾಗಿದ್ದು, 15 ದಿನಗಳ ಒಳಗೆ ಅಕ್ಷೇಪಣೆ ಸಲ್ಲಿಸಲು ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರಾಭಿವೃದ್ಧಿ ಇಲಾಖೆಯಿಂದ ಪ್ರಕಟಿಸಿದ ಅಧಿಸೂಚನೆ ಅನ್ವಯ ವಾರ್ಡ್ ಗಳ ಹೆಸರು ಇನ್ನಿತರ ವಿಷಯಗಳು ಸಂಬಂಧಿಸಿದ ಆಕ್ಷೇಪಣೆಗಳನ್ನು 15 ದಿನಗಳ ಒಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, ನಾಲ್ಕನೇ ಮಹಡಿ, ವಿಕಾಸ ಸೌಧ ಬೆಂಗಳೂರು -1 ಈ ವಿಳಾಸಕ್ಕೆ ತಲುಪಿಸಬೇಕಿದೆ. ಹಳೆ ವಾರ್ಡ್, ಹೊಸ ವಾರ್ಡ್ ಗಳ ಬದಲಾವಣೆ ಕುರಿತ ಮಾಹಿತಿಗೆ ವೆಬ್ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular