HomeKarnatakaBIG NEWS: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿಗಳು ಅರೆಸ್ಟ್

BIG NEWS: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿಗಳು ಅರೆಸ್ಟ್

ಬೆಂಗಳೂರು: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಕರಿಗೆ, ಮಹಿಳೆಯರಿಗೆ ನಂಬಿಸಿ ವಂಚಿಸುತ್ತಿದ್ದ ಗ್ಯಾಂಗ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿಯಲ್ಲಿ ಕೆಲಸ ಕೊಡಿಸುತ್ತೇವೆ, ಸಬ್ಸಿಡಿ ಹಣ ಸಿಗುತ್ತೆ, ಸೈಟ್, ಮನೆ ಕೊಡಿಸುವುದಾಗಿ ಹೇಳಿ ಅಮಾಯಕರಿಂದ 8ರಿಂದ 10 ಸಾವಿರ ರೂಪಾಯಿ ಹಣ ಪಡೆದು ಆರೋಪಿಗಳು ಪರಾರಿಯಾಗುತ್ತಿದ್ದರು. ಕೆಲಸದ ಆಸೆಗಾಗಿ ಹಲವರು ಹಣ ನೀಡಿ ಮೋಸ ಹೋಗಿದ್ದಾರೆ.

ಹೀಗೆ 60ಕ್ಕೂ ಹೆಚ್ಚು ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣವನ್ನು ಆರೋಪಿಗಳು ವಂಚಿಸಿದ್ದರು. ಇದೀಗ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ ದೀಪಕ್, ಹರೀಶ್ ಹಾಗೂ ಅವರ ಸ್ನೇಹಿತರ ಗುಂಪನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular