ಬಿಬಿಎಂಪಿ ಕಾಮಗಾರಿಗಳ ಅಕ್ರಮ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಾಗಮೋಹನ್ ದಾಸ್ ಆಯೋಗ ಶಿಫಾರಸು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20 ರಿಂದ 2022 -23ರ ಅವಧಿಯಲ್ಲಿ ನಡೆಸಲಾದ ಕಾಮಗಾರಿಗಳಲ್ಲಿ ಹಲವು ಲೋಪ ಕಂಡು ಬಂದಿವೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶನಿವಾರ ಬೆಂಗಳೂರಿನಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 8,900 ಪುಟಗಳ ವರದಿ ಸಲ್ಲಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕೋರಿಕೆಯ ಮೇರೆಗೆ ಸಿಎಂ ಆಯೋಗವನ್ನು ರಚಿಸಿದ್ದರು.

ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗಮೋಹನ್ ದಾಸ್ ವರದಿ ಸಲ್ಲಿಸಿದ್ದಾರೆ. ಕಾಮಗಾರಿಯಲ್ಲಿ ಹಲವು ನ್ಯೂನ್ಯತೆ ಕಂಡುಬಂದಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read