HomeKarnatakaBREAKING: BBMP 57 ಗುತ್ತಿಗೆದಾರರ ವಿರುದ್ಧ FIR ದಾಖಲು

BREAKING: BBMP 57 ಗುತ್ತಿಗೆದಾರರ ವಿರುದ್ಧ FIR ದಾಖಲು

ಬೆಂಗಳೂರು: ಗುತ್ತಿಗೆದಾರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತೊಂದು ಹಂತ ತಲುಪಿದೆ. ಬಿಬಿಎಂಪಿಯ 57 ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ.

ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಗುತ್ತಿಗೆದಾರ ಮಂಜುನಾಥ್ ಸೇರಿ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ವರ್ಷಗಳಿಂದ ಬಿಲ್ ಕ್ಲೀಯರ್ ಆಗಿಲ್ಲ. ಬಿಲ್ ಕ್ಲೀಯರ್ ಮಾಡುವಂತೆ ಗುತ್ತಿಗೆದಾರರು ಒತ್ತಡ ಹಾಕುತ್ತಿದ್ದಾರೆ. ಅಲ್ಲದೇ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಅಧಿಕಾರಿ ಮಹದೇವ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 57 ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular