HomeKarnatakaBBMP ಕಾಮಗಾರಿ ಅಕ್ರಮ; ತನಿಖೆಗೆ ರಚಿಸಿದ್ದ SIT ಹಿಂಪಡೆದ ರಾಜ್ಯ ಸರ್ಕಾರ

BBMP ಕಾಮಗಾರಿ ಅಕ್ರಮ; ತನಿಖೆಗೆ ರಚಿಸಿದ್ದ SIT ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಬಿಬಿಎಂಪಿ ಕಾಮಗಾರಿ ತನಿಖೆಗೆ ನಾಲ್ಕು ಎಸ್ ಐಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ತನಿಖೆಗೆ ರಚಿಸಿದ್ದ ಎಸ್ ಐಟಿಯನ್ನು ಸರ್ಕಾರ ಹಿಂಪಡೆದಿದೆ.

ಬಿಬಿಎಂಪಿ ಕಾಮಗಾರಿ ತನಿಖೆಗೆ ನಾಗಮೋಹನ್ ದಾಸ್ ಕಮಿಟಿಯಿಂದ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿದೆ. ಈಗಾಗಲೇ ನಾಲ್ಕು ಎಸ್ ಐಟಿ ತನಿಖಾ ತಂಡ ಸಂಗ್ರಹಿಸಿರುವ ಮಾಹಿತಿಗಳನ್ನು ನಾಗಮೋಹನ್ ದಾಸ್ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019ರಿಂದ 2023ವರೆಗಿನ ಬಿಬಿಎಂಪಿ ವ್ಯಾಪ್ತಿಯ ಯೋಜನೆ, ಕಾಮಗಾರಿಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ 4 ಎಸ್ ಐಟಿ ರಚನೆ ಮಾಡಿತ್ತು. ಆದರೆ ಹೈಕೋರ್ಟ್ ಎಸ್ ಐಟಿ ತನಿಖೆಗೆ ತಡೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ ಐಟಿ ಹಿಂಪಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular