HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ ನೀಡಿದ ನಂತರ ಪೌಷ್ಟಿಕತೆ ಹೆಚ್ಚಳ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ ನೀಡಿದ ನಂತರ ಪೌಷ್ಟಿಕತೆ ಹೆಚ್ಚಳ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ನೀಡಲಾಗುತ್ತಿದೆ. ಮೊಟ್ಟೆ ನೀಡಲು ಆರಂಭಿಸಿದ ನಂತರ ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಾಗಿದೆ. ಯಾರಿಗೂ ಮೊಟ್ಟೆ ತಿನ್ನಲು ಬಲವಂತ ಮಾಡಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲೆಗಳಲ್ಲಿ ಮತ್ತೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ನೀಡಲಾಗುತ್ತಿದ್ದು, ಯಾವುದನ್ನು ಸೇವಿಸಬೇಕೆಂಬುದು ಮಕ್ಕಳ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2017ರಿಂದಲೇ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ನೀಡಲು ಚರ್ಚೆ ನಡೆಯುತ್ತಿದೆ. ನಮ್ಮ ಸರ್ಕಾರ ಯಾವುದೇ ವಿರೋಧ ಬಂದರೂ ಲೆಕ್ಕಿಸದೆ ಅಪೌಷ್ಟಿಕತೆ ಕಂಡು ಬಂದ ಜಿಲ್ಲೆಗಳಲ್ಲಿ ಮೊಟ್ಟೆ ನೀಡುತ್ತಾ ಬಂದಿದೆ ಎಂದು ಹೇಳಿದ್ದಾರೆ.

1ರಿಂದ 15 ವರ್ಷದ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತ ಹೀನತೆ, ಬಹು ಪೋಷಕಾಂಶಗಳ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ 2021 -22ನೇ ಸಾಲಿನಿಂದ ಮೊಟ್ಟೆ ನೀಡುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ,

ಮಕ್ಕಳಿಗೆ ಬಲವಂತವಾಗಿ ಮೊಟ್ಟೆ ಕೊಡುತ್ತಿಲ್ಲ, ಮಕ್ಕಳೇ ತಮಗೆ ಬೇಕಾದದ್ದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಶಾಲಾ ಮಕ್ಕಳಿಗೆ ಸಾತ್ವಿಕ ಆಹಾರ ನೀಡಲು ಮಠಾಧೀಶರು ಹಾಗೂ ಗಣ್ಯರು ಸಲಹೆ ನೀಡಿದ್ದಾರೆ, ಆದರೆ, ಸಾತ್ವಿಕ ಆಹಾರ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular