HomeLatest NewsBreaking News: ವಿವಾದದ ಬೆನ್ನಲ್ಲೇ BCCI ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

Breaking News: ವಿವಾದದ ಬೆನ್ನಲ್ಲೇ BCCI ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಖಾಸಗಿ ಚಾನೆಲ್ ಒಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಬಿಸಿಸಿಐ ಕುರಿತ ಹಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಖಾಸಗಿ ಚಾನೆಲ್ ನ ಈ ಕಾರ್ಯಾಚರಣೆಯಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಸೇರಿದಂತೆ ಹಲವು ಕ್ರಿಕೆಟಿಗರ ವಿರುದ್ಧ ಚೇತನ್ ಶರ್ಮಾ ತಮ್ಮ ನಾಲಿಗೆ ಹರಿಬಿಟ್ಟಿದ್ದರು. ಅಲ್ಲದೆ ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್‌ ಗಂಗೂಲಿ ವಿರುದ್ಧವೂ ಮಾತನಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಿಟ್ನೆಸ್ ಗಾಗಿ ಕೆಲ ಕ್ರಿಕೆಟಿಗರು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಎಂದು ಚೇತನ್ ಶರ್ಮಾ ಹೇಳಿದ್ದು, ದೊಡ್ಡ ವಿವಾದ ಹುಟ್ಟು ಹಾಕಲು ಕಾರಣವಾಗಿತ್ತು. ಇದೀಗ ಮುಖಭಂಗ ತಪ್ಪಿಸಿಕೊಳ್ಳಲು ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular