HomeLatest Newsಬಿಸಿಸಿಐ ಮಹತ್ವದ ಸಭೆಗೆ ಗೈರಾದ ಅಜಿತ್ ಅಗರ್ಕರ್: ಆಯ್ಕೆ ಸಮಿತಿ ಅಧ್ಯಕ್ಷರ ಗೈರುಹಾಜರಿಗೆ ಅಸಲಿ ಕಾರಣ...

ಬಿಸಿಸಿಐ ಮಹತ್ವದ ಸಭೆಗೆ ಗೈರಾದ ಅಜಿತ್ ಅಗರ್ಕರ್: ಆಯ್ಕೆ ಸಮಿತಿ ಅಧ್ಯಕ್ಷರ ಗೈರುಹಾಜರಿಗೆ ಅಸಲಿ ಕಾರಣ ಇಲ್ಲಿದೆ

ಮುಂಬೈನಲ್ಲಿ ಇತ್ತೀಚೆಗೆ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪ್ರಮುಖ ಸಭೆಯಲ್ಲಿ ಟೀಮ್ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ನಾಯಕರಾದ ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಭಾಗವಹಿಸಿದ್ದರು. ಆದರೆ ಈ ಸಭೆಯಲ್ಲಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೈರುಹಾಜರಾಗಿದ್ದು, ಹಲವು ಅನುಮಾನಗಳಿಗೆ ಹಾಗೂ ಊಹಾಪೋಹಗಳಿಗೆ ಕಾರಣವಾಗಿತ್ತು. ಅವರ ಒಪ್ಪಂದದ ಅವಧಿ ಮುಕ್ತಾಯಗೊಳ್ಳುತ್ತಿರುವ ಬೆನ್ನಲ್ಲೇ ಈ ಗೈರುಹಾಜರಿ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಆದರೆ ಈ ಎಲ್ಲಾ ವದಂತಿಗಳಿಗೆ ಬಿಸಿಸಿಐ ಜಂಟಿ ಕಾರ್ಯದರ್ಶಿ ದೇವಾಜಿತ್ ಸೈಕಿಯಾ ಸ್ಪಷ್ಟನೆ ನೀಡಿದ್ದಾರೆ. ಸಭೆಯನ್ನು ಅತ್ಯಂತ ಅಲ್ಪಾವಧಿಯ ನೋಟಿಸ್‌ನಲ್ಲಿ ಕರೆಯಲಾಗಿತ್ತು. ಆ ಸಮಯದಲ್ಲಿ ಅಜಿತ್ ಅಗರ್ಕರ್ ನಗರದಲ್ಲ ಇರಲಿಲ್ಲ. ಅಲ್ಲದೆ ಅವರು ಇದ್ದ ಪ್ರದೇಶದಲ್ಲಿ ಸರಿಯಾದ ನೆಟ್‌ವರ್ಕ್ ಇಲ್ಲದ ಕಾರಣ ಆನ್‌ಲೈನ್ ಮೂಲಕವೂ ಸಭೆಗೆ ಜೋಡಣೆಯಾಗಲು ಸಾಧ್ಯವಾಗಲಿಲ್ಲ ಎಂದು ಅವರು ವಿವರಣೆ ನೀಡಿದ್ದಾರೆ.

ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯದ ಕುರಿತು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳನ್ನು ಬಿಸಿಸಿಐ ತಳ್ಳಿಹಾಕಿದೆ. ಅಲ್ಲದೆ ಅಜಿತ್ ಅಗರ್ಕರ್ ಅವರ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಬರಲಿದ್ದಾರೆ ಎಂಬ ವದಂತಿಗಳಲ್ಲೂ ಯಾವುದೇ ಸತ್ಯಾಂಶವಿಲ್ಲ. ಅಗರ್ಕರ್ ಅವರ ಹುದ್ದೆ ಸುರಕ್ಷಿತವಾಗಿದ್ದು, ಮುಂದಿನ ವರ್ಷದ ಜುಲೈವರೆಗೆ ಅವರ ಒಪ್ಪಂದದ ಅವಧಿ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಭೆಯಲ್ಲಿ ಯಾವುದೇ ತಂಡದ ಆಯ್ಕೆಯ ಕುರಿತು ಚರ್ಚೆಗಳು ನಡೆದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಶ್ರೀಲಂಕಾ ಪ್ರವಾಸದ ವೇಳೆ ಕೊನೆಯದಾಗಿ ಕಾಣಿಸಿಕೊಂಡಿದ್ದ ಅಗರ್ಕರ್, ಶೀಘ್ರದಲ್ಲೇ ದುಲೀಪ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular