HomeKarnatakaಬಿಡಿಎ ಪ್ರಥಮ ದರ್ಜೆ ಸಹಾಯಕರ ಹುದ್ದೆ ನೇರ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬಿಡಿಎ ಪ್ರಥಮ ದರ್ಜೆ ಸಹಾಯಕರ ಹುದ್ದೆ ನೇರ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ದಲ್ಲಿನ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 20-02-2026 ರಂದು BDA ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಗೆ ತೀವ್ರ ಆಕ್ಷೇಪಣೆಗಳು ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ ಸದರಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹಿಂಪಡೆಯಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ನೇರ ನೇಮಕಾತಿಯಿಂದ ಭರ್ತಿ ಮಾಡುವ ಸಂಬಂಧ ಪ್ರಕಟಣೆ ://໙-1/3/2.2/1260/2025-26 20:20.02.2026 ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು 15 ದಿನಗಳ ಒಳಗೆ ಸಲ್ಲಿಸುವಂತೆ ತಿಳಿಸಿದ್ದು, ಸದರಿ ಪ್ರಕಟಣೆಗೆ ತೀವ್ರ ಆಕ್ಷೇಪಣೆಗಳು ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಸಹಮತದೊಂದಿಗೆ ಮರು ಪ್ರಕಟಣೆಯನ್ನು ಹೊರಡಿಸಲು ಕ್ರಮವಹಿಸಲಾಗುತ್ತಿರುವುದರಿಂದ ಮೇಲ್ಕಂಡ ಪ್ರಕಟಣೆಯನ್ನು ಹಿಂಪಡೆಯಲಾಗಿದೆಯೆಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular