HomeKarnatakaಮನೆಗೆ ತೆರಳದೇ ಕಚೇರಿಯಲ್ಲೇ ಇರುವಂತೆ BDA ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆ: ಮೂವರು ಬ್ರೋಕರ್ ಗಳು ವಶಕ್ಕೆ

ಮನೆಗೆ ತೆರಳದೇ ಕಚೇರಿಯಲ್ಲೇ ಇರುವಂತೆ BDA ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆ: ಮೂವರು ಬ್ರೋಕರ್ ಗಳು ವಶಕ್ಕೆ

ಬೆಂಗಳೂರು: ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ನಿಮ್ಮ ನಿಮ್ಮ ಸೆಕ್ಷನ್ ಗಳಲ್ಲಿ ಇರಿ ಎಂದು ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಪ್ರತಿ ಸೆಕ್ಷನ್ ನಲ್ಲಿ ತಪಾಸಣೆ ನಡೆಯುವವರೆಗೆ ಇಲ್ಲೇ ಇರಬೇಕು ಎಂದು ಬಿಡಿಎ ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಪೊಲೀಸರು ಸೂಚಿಸಿದ್ದಾರೆ.

ಬಿಡಿಎ ಕಚೇರಿಯಲ್ಲಿ ಮೂವರು ಬ್ರೋಕರ್ ಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬಿಡಿಎ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ತಾವು ನೊಂದವರು ಎಂದು ಬ್ರೋಕರ್ ಗಳು ಪೋಸ್ ಕೊಟ್ಟಿದ್ದರು. ತಮ್ಮ ಬಳಿ 50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕತೆ ಕಟ್ಟಿದ್ದರು. ಸಿಬ್ಬಂದಿಗಳಾದ ಶಾಂತರಾಜು ಮತ್ತು ಮಂಜುನಾಥ ಅವರ ವಿರುದ್ಧ ಆರೋಪ ಮಾಡಿದ್ದರು. ಹೆಚ್ಎಸ್ಆರ್ ಲೇಔಟ್ ನಲ್ಲಿ ಒಂದೂವರೆ ಎಕರೆ ಭೂಸ್ವಾಧೀನ ಆಗಿದೆ. ಪರಿಹಾರ ನೀಡಿಲ್ಲ ಎಂದು ಬ್ರೋಕರ್ ಗಳು ಹೇಳಿದ್ದು, ಅಧಿಕಾರಿಗಳನ್ನು ನೋಡಲು ಬಂದಿರುವುದಾಗಿ ಅವರು ತಿಳಿಸಿದ್ದಾರೆ. ಬ್ರೋಕರ್ ಮಂಜುನಾಥ, ಆದಿ ನಾರಾಯಣ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular