ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಿರ್ಮಿಸಿದ ಡಾ.ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳನ್ನು ಇಂದು ಹಂಚಿಕೆ ಮಾಡಲಾಗುವುದು.
ಬಡಾವಣೆ ನಿರ್ಮಾಣಕ್ಕೆ ಜಮೀನು ಬಿಟ್ಟುಕೊಟ್ಟ ರೈತರು, ಭೂ ಮಾಲೀಕರಿಗೆ 18,000 ನಿವೇಶನಗಳ ಪೈಕಿ ಕೆಲವು ಭೂ ಮಾಲೀಕರಿಗೆ ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಂಕೇತಿಕವಾಗಿ ನಿವೇಶನಗಳನ್ನು ಹಂಚಿಕೆ ಮಾಡಲಿದ್ದಾರೆ.
ಭೂ ಮಾಲೀಕರಿಗೆ ನಿವೇಶನ ವಿತರಣೆ ಮತ್ತು ಸಾರ್ವಜನಿಕರಿಗೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಆಗಸ್ಟ್ 5ರಂದು ಹಮ್ಮಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದು ಕೈಗೂಡಿರಲಿಲ್ಲ. ಆಗಸ್ಟ್ 31 ರಂದು ಬೆಳಿಗ್ಗೆ 11:30 ಕ್ಕೆ ನೆಹರು ತಾರಾಲಯದ ಯುಆರ್ ಭವನದಲ್ಲಿ ಸಾಂಕೇತಿಕವಾಗಿ ಸಿಎಂ ಡಿ.ಕೆ. ಶಿವಕುಮಾರ್ 600ಕ್ಕೂ ಅಧಿಕ ಭೂಮಾಲೀಕರಿಗೆ ನಿವೇಶನ ವಿತರಿಸಲಿದ್ದಾರೆ. ಉಳಿದವರಿಗೆ ಕೌಂಟರ್ ನಲ್ಲಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.
ಇಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭೂ ಮಾಲೀಕರಿಗೆ ನಿವೇಶನ ಹಂಚಿಕೆ ಪತ್ರ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಆಹಾರ ಸಚಿವ ರಿಜ್ವಾನ್ ಅರ್ಷದ್ ಉಪಸ್ಥಿತರಿರುವರು. ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಅಧ್ಯಕ್ಷತೆ ವಹಿಸಲಿದ್ದಾರೆ.

