HomeJobsBig Update: ಬಿಡಿಎ ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪ್ರಕಟಣೆ ವಾಪಸ್

Big Update: ಬಿಡಿಎ ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪ್ರಕಟಣೆ ವಾಪಸ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಫೆ.20ರಂದು ಪ್ರಕಟಿಸಿತ್ತು.

ಆದರೆ ಈಗ ಈ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದೆ. ಸಮಾಜ ಕಲ್ಯಾಣ ಇಲಾಖೆ ಸಹಮತದೊಂದಿಗೆ ಮರು ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ನೇರ ನೇಮಕಾತಿಯಿಂದ ಭರ್ತಿ ಮಾಡುವ ಸಂಬಂಧ ಪ್ರಕಟಣೆ ಸಂಖ್ಯೆ:ಬೆಂಅಪ್ರಾ/ಆ/ಉಕಾ-1/ಅ/ಸಿ.ವಿ/1260/2025-26 ದಿನಾಂಕ:20.02.2026 ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು 15 ದಿನಗಳ ಒಳಗೆ ಸಲ್ಲಿಸುವಂತೆ ತಿಳಿಸಿದ್ದು, ಸದರಿ ಪ್ರಕಟಣೆಗೆ ತೀವ್ರ ಆಕ್ಷೇಪಣೆಗಳು ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಸಹಮತದೊಂದಿಗೆ ಮರು ಪ್ರಕಟಣೆಯನ್ನು ಹೊರಡಿಸಲು ಕ್ರಮವಹಿಸಲಾಗುತ್ತಿರುವುದರಿಂದ ಮೇಲ್ಕಂಡ ಪ್ರಕಟಣೆಯನ್ನು ಹಿಂಪಡೆಯಲಾಗಿದೆಯೆಂದು ಈ ಮೂಲಕ ತಿಳಿಸಿದೆ’ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮೀಸಲಾತಿ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಪೋಸ್ಟ್ ಹಾಕುತ್ತಿದ್ದಾರೆ.

ಆದ್ದರಿಂದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವಾಪಸ್ ಪಡೆಯಲಾಗಿದೆ. ಹೊಸ ಆಯ್ಕೆಪಟ್ಟಿ ಯಾವಾಗ ಪ್ರಕಟವಾಗಲಿದೆ? ಎಂದು ಬಿಡಿಎ ಸದ್ಯಕ್ಕೆ ಮಾಹಿತಿ ನೀಡಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular