HomeKarnatakaBe Alert : ವಾಹನ ಸವಾರರೇ ಇಂದಿನಿಂದ ಬದಲಾಗಲಿದೆ ಈ ರೂಲ್ಸ್ , ನಿಯಮ ಉಲ್ಲಂಘಿಸಿದ್ರೆ...

Be Alert : ವಾಹನ ಸವಾರರೇ ಇಂದಿನಿಂದ ಬದಲಾಗಲಿದೆ ಈ ರೂಲ್ಸ್ , ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್.!

ಬೆಂಗಳೂರು : ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇದು ಆಗಸ್ಟ್ 1 ಇಂದಿನಿಂದ ಜಾರಿಗೆ ಬರಲಿದೆ.

ಹೌದು. ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಸಬೇಡಿ..!

ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ಲೈಟ್ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣುಕುಕ್ಕುವ ಹೆಡ್ಲೈಟ್ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular