ಹಾಲು ಬಳಸುವ ಮುನ್ನ ಗಮನಿಸಿ, ಬೆಳ್ಳಗಿರೋದೆಲ್ಲ ಹಾಲಲ್ಲ…! ಕೆಮಿಕಲ್ ಮಿಶ್ರಿತ ಹಾಲು ತಯಾರಿಕಾ ಘಟಕದ ಮೇಲೆ ದಾಳಿ

ಕೋಲಾರ: ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಸವಟೂರು ಗ್ರಾಮದಲ್ಲಿರುವ ಹರೀಶ್ ರೆಡ್ಡಿ ಅವರ ಹಾಲಿನ ಘಟಕದ ಮೇಲೆ ದಾಳಿ ನಡೆಸಲಾಗಿದೆ. ತಿರುಮಲ ಹಾಲಿನ ಡೈರಿಗೆ ಹರೀಶ್ ರೆಡ್ಡಿ ಹಾಲು ಪೂರೈಸುತ್ತಿದ್ದರು.

ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕೆಮಿಕಲ್ ಸೇರಿದಂತೆ ಉಪಕರಣಗಳನ್ನು ದಾಳಿಯ ವೇಳೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಲಿನ ಮಾದರಿ ಸಂಗ್ರಹಿಸಿ ಟೆಸ್ಟ್ ಗೆ ಕಳುಹಿಸಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read