BREAKING : ನಟ ದರ್ಶನ್ ಗೆ ‘VIP ಟ್ರೀಟ್ ಮೆಂಟ್’ ಕೊಟ್ಟರೆ ಹುಷಾರ್ : ಜೈಲಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ.!

ಬೆಂಗಳೂರು : ನಟ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂಕೋರ್ಟ್ ಗರಂ ಆಗಿದೆ. ನಟ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ಆರೋಪಿಗಳಿಗೆ ಜೈಲಿನ ಆವರಣದಲ್ಲಿ ಫೈವ್ ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನವೇ ನಾವು ಜೈಲು ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸುತ್ತೇವೆ” ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದರು, ಜೈಲಿನಲ್ಲಿ ಧೂಮಪಾನ ಮಾಡಲು ಅಥವಾ ಮದ್ಯಪಾನ ಮಾಡಲು ಅವಕಾಶ ನೀಡದಂತೆ ಎಚ್ಚರಿಕೆ ನೀಡಿದರು.

ಡಿಸೆಂಬರ್ 13, 2024 ರಂದು ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವು “ಗಂಭೀರ ಕಾನೂನು ದೌರ್ಬಲ್ಯ” ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರ ಪೀಠ ಹೇಳಿದೆ.

ಜೈಲಿನಲ್ಲಿರುವಾಗ ನಟ ದರ್ಶನ್ ಗೆ  ಜೈಲಿನಲ್ಲಿ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ , ಪೊಲೀಸ್ ಅಧೀಕ್ಷಕರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಗರಂ ಆಗಿದೆ. ಹಾಗೂ ಹೈಕೋರ್ಟ್ ಆದೇಶದ ಲೋಪವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದು ಸುಪ್ರೀಂಕೋರ್ಟ್ ಆರೋಪಿಸಿದೆ. ಆರೋಪಿ ಜೈಲಿನ ಲಾಲ್ ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಕ್ರಮ ಎಂದು  ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read