HomeLatest NewsBIG NEWS : ಸಾರ್ವಜನಿಕರ 'ವಾಹನ ತಪಾಸಣೆ' ವೇಳೆ ಸೌಜನ್ಯದಿಂದ ವರ್ತಿಸಿ : ರಾಜ್ಯದ ಎಲ್ಲಾ...

BIG NEWS : ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ಸೌಜನ್ಯದಿಂದ ವರ್ತಿಸಿ : ರಾಜ್ಯದ ಎಲ್ಲಾ ಪೊಲೀಸರಿಗೆ ಖಡಕ್ ಆದೇಶ.!

ಬೆಂಗಳೂರು : ವಾಹನ ತಪಾಸಣಾ/ಪರಿಶೀಲನೆ ಸಮಯದಲ್ಲಿ ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ, ಹಲ್ಲೆ, ಮತ್ತು ದುರ್ನಡತೆ ತೋರುತ್ತಿರುವ ಬಗ್ಗೆ. ಪೊಲೀಸ್ ಅಧಿಕಾರಿ ಆವಾಚ್ಯ ಶಬ್ದಗಳ ಬಳಕೆ ಮಾಡುತ್ತಿರುವ ದೂರು ಕೇಳಿಬಂದಿದ್ದು, ಈ ಹಿನ್ನೆಲೆ ಆರ್. ಹಿತೇಂದ್ರ, ಐಪಿಎಸ್) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಏನಿದೆ ಆದೇಶದಲ್ಲಿ..?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ದೂರುದಾರರ ಅರ್ಜಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು, ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಕಾಲಕಾಲಕ್ಕೆ ಪೊಲೀಸ್ ಇಲಾಖೆಯಿಂದ ಹಲವಾರು ಸುತ್ತೋಲೆ, ಜ್ಞಾಪನಗಳನ್ನು ಹೊರಡಿಸಿದ್ದರೂ ಸಹ ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಆವಹೇಳನಕಾರಿ, ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಕೆಲವು ಘಟನೆಗಳು ಮಾಧ್ಯಮಗಳಲ್ಲಿ ಜಾಲತಾಣಗಳಲ್ಲಿ ಹರದಾಡಿದ್ದು ಅದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ, ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್ ಚಾಲಕನ ಮೇಲೆ ಪೊಲೀಸ್ ಪೇದೆಯಿಂದ ನಡೆದ ಹಲ್ಲೆ, ಚಿತ್ರದುರ್ಗದಲ್ಲಿ ವಾಹನ ಪರಿಶೀಲನೆ ವೇಳೆ ಆಟೋ ಚಾಲಕನಿಗೆ ಪೊಲೀಸ್ ಸಿಬ್ಬಂದಿ ಕಿರುಕುಳ ನೀಡಿದ್ದರಿಂದ ಮನನೊಂದ ಚಾಲಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ದೌರ್ಜನ್ಯ ವೆಸಗಿದ ಘಟನೆ, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿದ್ದು ಸಾವರ್ಜನಿಕರು ರಾಜ್ಯ ಪೊಲೀಸ್ ಇಲಾಖೆಯನ್ನು ಅಗೌರವದಿಂದ ನೋಡುವಂತಾಗುತ್ತಿದೆ. ಈ ಬಗ್ಗೆ ಸೂಕ್ತ ನಿರ್ದೇಶನನೀಡುವಂತೆ ಆಗತ್ಯ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ.

ಆದ್ದರಿಂದ ಪೊಲೀಸ್ ಸಿಬ್ಬಂದಿಗಳು ದಂಡದ ಮೊತ್ತವನ್ನು ವಸೂಲಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ, ವಾಹನ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ಸಾವರ್ಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular