HomeKarnatakaಬಸ್ ನಿಲ್ಲಿಸಿಲ್ಲ ಎಂದು ಚಾಲಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಬಸ್ ನಿಲ್ಲಿಸಿಲ್ಲ ಎಂದು ಚಾಲಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಅನ್ಯಕೋಮಿನ ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಬೈಲಹೊಂಗಲದಿಂದ ಧಾರವಾಡಕ್ಕೆ ಸರ್ಕಾರಿ ಬಸ್ ಹೊರಟಿದ್ದು, ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಮಹಿಳೆಗೆ ನಿರ್ವಾಹಕ ಬೈದಿದ್ದಾರೆ. ಚಲಿಸುವಾಗ ಬಸ್ ಹತ್ತದಂತೆ ಹೇಳಿದ್ದು, ಕೊನೆಗೆ ಬಸ್ ನಿಲ್ಲಿಸಲಾಗಿದೆ. ಆಗ ಅಲ್ಲೇ ಇದ್ದ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಿಲ್ದಾಣದಲ್ಲಿರುವ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಯುವಕರು ಹಲ್ಲೆ ನಡೆಸಿದ್ದು, ಇದರಿಂದ ಆಕ್ರೋಶಗೊಂಡ ನಿಲ್ದಾಣದಲ್ಲಿದ್ದ ಬಸ್ ಗಳ ಚಾಲಕರು ಮತ್ತು ನಿರ್ವಾಹಕರು ಬಸ್ ಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಠಾಣೆ ಬಳಿ ಜಮಾವಣೆಗೊಂಡು ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular