HomeKarnatakaಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಪೊಲೀಸರು, ಅರಣ್ಯ ಇಲಾಖೆ ನೌಕರರ ಮೇಲೆ ರೌಡಿಶೀಟರ್ ಗಳ...

ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಪೊಲೀಸರು, ಅರಣ್ಯ ಇಲಾಖೆ ನೌಕರರ ಮೇಲೆ ರೌಡಿಶೀಟರ್ ಗಳ ಹಲ್ಲೆ

ರಾಮನಗರ ಜಿಲ್ಲೆ ಕನಕಪುರ ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದಲ್ಲಿ ರೌಡಿಶೀಟರ್ ಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಕುಳಿತುಕೊಂಡು ಆರೋಪಿಗಳು ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಪ್ರಶ್ನಿಸಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಯ ಜೊತೆಗೂ ಗಲಾಟೆ ಮಾಡಿ ವಾಹನಕ್ಕೆ ಬೆಂಕಿ ಹಚ್ಚಲು ಆರೋಪಿಗಳು ಮುಂದಾಗಿದ್ದಾರೆ.

112ಕ್ಕೆ ಕರೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸಾತನೂರು ಪೊಲೀಸರ ಜೊತೆಗೂ ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಟ್ಯಾಬ್ ಹೊಡೆದು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಶೀಟರ್ ಕಿರಣ್, ಸುಂದರ್, ಪ್ರತಾಪ್ ಅವರನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular