ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.

ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ ವ್ಯಕ್ತಿಯನ್ನು ಕಟ್ಟಿದ ಪತ್ನಿಯ ಕುಟುಂಬದವರು ಹಲ್ಲೆ ಮಾಡಿದ್ದಾರೆ. ದಂಪತಿ ಮುದ್ದೇಬಿಹಾಳ ತಾಲೂಕಿನ ಬೇರೆ ಬೇರೆ ಗ್ರಾಮದವರಾಗಿದ್ದು, ಮದುವೆಯಾದ ಕೆಲವು ದಿನಗಳಲ್ಲೇ ಪತ್ನಿ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ದೂರಿದ ಪತಿ ಆಕೆಯನ್ನು ತವರು ಮನೆಗೆ ಕಳುಹಿಸಿ ಡೈವೋಸ್ ಗೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಡೈವೋರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಬಂದ ಸಂದರ್ಭದಲ್ಲಿ ಪತ್ನಿ ಸೇರಿದಂತೆ ನಾಲ್ವರು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಕೋರ್ಟ್ ಮುಂದಿನ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಥಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು, ಮುದ್ದೇಬಿಹಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read