HomeKarnatakaಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ ಕರೆದಿತ್ತು.

ಆರ್ಕಿಡ್ ಶಾಲಾ ಆಡಳಿತ ಮಂಡಳಿ ಸಭೆ ಕರೆದಿತ್ತು. ಸಭೆಗೆ ಆಹ್ವಾನಿಸಿ ಗೇಟ್ ಹೊರಗಡೆಯೇ ನಿಲ್ಲಿಸಲಾಗಿತ್ತು. ಈ ವೇಳೆ ಪೋಷಕರು ಹಾಗೂ ಆಡಳಿತ ಮಂಡಳಿ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಆಗ ಶಾಲಾ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪೋಷಕರು ಗಲಾಟೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬಿಎಸ್‌ಇ ಸಿಲೆಬಸ್ ಮಾನ್ಯತೆ ಪಡೆಯದೇ ಸಿಬಿಎಸ್ಇ ಮಾನ್ಯತೆ ಪಡೆದ ಶಾಲೆ ಎಂದು ಬೋರ್ಡ್ ಅಳವಡಿಸಲಾಗಿದ್ದು, ಲಕ್ಷ ಲಕ್ಷ ರೂ. ಶುಲ್ಕ ಪಡೆದುಕೊಳ್ಳಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular