HomeKarnatakaದುಷ್ಕರ್ಮಿಗಳ ಅಟ್ಟಹಾಸ: ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ

ದುಷ್ಕರ್ಮಿಗಳ ಅಟ್ಟಹಾಸ: ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ

ರಾಯಚೂರು: ಪ್ರೀತಿ ಪ್ರೇಮದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ ನಡೆಸಲಾಗಿದೆ.

ಪೋಷಕರ ಮೇಲೆ ಪ್ರಣವ್ ಮತ್ತು ಸಹಚರರು ಕ್ರೌರ್ಯ ಮೆರೆದಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್. ಕ್ಯಾಂಪ್ 3ರಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 14ರಂದು ಘಟನೆ ನಡೆದಿದೆ. ಯುವಕನಿಂದ ತಮ್ಮ ಮಗಳನ್ನು ಬೇರೆ ಮಾಡಿ ಊರಿಗೆ ಕಳಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಯುವತಿ ಸಂಪರ್ಕಕ್ಕೆ ಸಿಗದಿದ್ದಾಗ ಮರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹೀರಾರಾ ಮೋಹನ್ ಮತ್ತು ತಾಯಿ ಶ್ರುತಿ ಮಂಡಲ್, ಸಹೋದರ ಹಿಮಾಂಶು, ಸಂಬಂಧಿಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಹೀರಾ ಮೋಹನ್ ಕಣ್ಣಿಗೆ ಕಲ್ಲಿನಿಂದ ಜಜ್ಜಿ ಗಾಯಗೊಳಿಸಿದ್ದಾರೆ. ಯುವತಿ ತಾಯಿಯ ಸೀರೆ ಎಳೆದಾಡಿ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಗ್ರಾಮದಲ್ಲಿ ಅಟ್ಟಾಡಿಸಿ ಯುವತಿಯ ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಯುವತಿಯನ್ನು ಮತ್ತೆ ಕರೆದುಕೊಂಡು ಬನ್ನಿ ಎಂದು ಹೇಳಿ ಹಲ್ಲೆ ಮಾಡಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಒಳಗಾದವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular