HomeKarnatakaಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ.

ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿಹಾರಕ್ಕಾಗಿ ಸೋಮೇಶ್ವರ ಬೀಚ್ ಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿಗಳು ಭಿನ್ನ ಕೋಮಿಗೆ ಸೇರಿದವರು. ಇವರನ್ನು ಗಮನಿಸಿದ ಗುಂಪು ಹಿಂಬಾಲಿಸಿ ವಿಹಾರ ನಡೆಸುವಾಗ ಹಲ್ಲೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರು ಊರಿಗೆ ತೆರಳಿದ್ದಾರೆ. ಉಳ್ಳಾಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಿಂದೂ ಯುವತಿಯರೊಂದಿಗೆ ಬಂದಿದ್ದ ಹಿನ್ನೆಲೆಯಲ್ಲಿ ಅನ್ಯಕೋಮಿನ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತನಿಖೆಗಾಗಿ ಪೊಲೀಸರು ಎರಡು ತಂಡ ರಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular