HomeKarnatakaಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಡ್ಯಾಂ ನಲ್ಲಿ ಘಟನೆ ನಡೆದಿದೆ. ಜಲಾಶಯ ವೀಕ್ಷಿಸಲು ಐವರು ಯುವಕರು ಆಟೋದಲ್ಲಿ ಬಂದಿದ್ದರು. ಸೆಕ್ಯೂರಿಟಿ ಗಾರ್ಡ್ ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ. ಕೋಪಗೊಂಡ ಯುವಕರು ಸೆಕ್ಯೂರಿಟಿ ಗಾರ್ಡ್ ನರಸಿಂಹಮೂರ್ತಿ ಮೇಲೆ ಹಲ್ಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಯುವಕರು ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ನಂತರ ಇಬ್ಬರು ಯುವಕರು ಪರಾರಿಯಾಗಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular