HomeKarnatakaಮಲೆನಾಡಿನಲ್ಲಿ ಸಮಾಜ ತಲೆತಗ್ಗಿಸುವ ಘಟನೆ: ತೋಟಕ್ಕೆ ಮೇಕೆ ನುಗ್ಗಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಮಲೆನಾಡಿನಲ್ಲಿ ಸಮಾಜ ತಲೆತಗ್ಗಿಸುವ ಘಟನೆ: ತೋಟಕ್ಕೆ ಮೇಕೆ ನುಗ್ಗಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಶಿವಮೊಗ್ಗ: ತೋಟಕ್ಕೆ ಮೇಕೆಗಳು ಹೆಣ್ಣು ನುಗ್ಗಿದ್ದರಿಂದ ಅವುಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಹಲ್ಲೆಗೊಳಗಾಗಿದ್ದಾರೆ. ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನ ಚಿಕಿತ್ಸೆ ಪಡೆದ ಮಹಿಳೆ ಮನೆಗೆ ಮರಳಿದ್ದಾರೆ.

ಆರಂಭದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ದಲಿತ ಸಂಘಟನೆಗಳ ಮಧ್ಯಪ್ರವೇಶದಿಂದ ಫೆಬ್ರವರಿ 25ರಂದು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10ಕ್ಕೂ ಹೆಚ್ಚು ಮೇಕೆಗಳು ತೋಟಕ್ಕೆ ನುಗ್ಗಿ ಗಿಡಗಳ ಎಲೆ ತಿಂದಿದ್ದವು. ಇದರಿಂದ ಆಕ್ರೋಶಗೊಂಡ ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವರ ಮಗ ಅರುಣ್ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular