ಬಿಎಡ್ ಕಡ್ಡಾಯ ರದ್ದು ಮಾಡಿದ ಸುಪ್ರೀಂ ಕೋರ್ಟ್: ಸರ್ಕಾರದ ಅಧಿಸೂಚನೆ ವಜಾ

ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದ ಬೋಧನಾ ಕೌಶಲ ಅತ್ಯಂತ ಮಹತ್ವದಾಗಿದೆ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಡಿಎಡ್ ಅರ್ಹತೆಯೇ ಹೊರತೂ ಬಿಎಡ್ ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿರುವುದಾಗಿ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ್ ಬೊಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ ತಿಳಿಸಿದೆ.

ಬಿಎಡ್ ಕಡ್ಡಾಯ ಅಧಿಸೂಚನೆ ರದ್ದು ಮಾಡಿದ ಸುಪ್ರೀಂ ಕೋರ್ಟ್, ಸರ್ಕಾರದ ನಿರ್ಧಾರ ಸ್ವೇಚ್ಛೆಯಿಂದ ಕೂಡಿದೆ. ಅದು ಅತಾರ್ಕಿಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಕಾಯ್ದೆಗೂ ಸರ್ಕಾರದ ನಿರ್ಧಾರಕ್ಕೂ ಸಂಬಂಧವಿಲ್ಲ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಅರ್ಹತೆಯಾಗಿ ಬಿಎಡ್ ನಿಗದಿ ಮಾಡಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಪ್ರಾಥಮಿಕ ಹಂತಗಳಲ್ಲಿ ಕಲಿಸಲು ಬಿಎಡ್ ಅರ್ಹತೆ ಅಗತ್ಯವಿಲ್ಲ. ಭಿನ್ನವಾದ ಅರ್ಹತೆ ಅಗತ್ಯವಿದೆ. ಪ್ರಾಥಮಿಕ ತರಗತಿಗಳಿಗೆ ಬಿಎಡ್ ವಿದ್ಯಾರ್ಹತೆ ಹೊಂದಿದವರು ಆಯ್ಕೆಯಾಗಿದ್ದರೆ ನೇಮಕವಾದ ಎರಡು ವರ್ಷದೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಪೂರ್ಣಗೊಳಿಸುವಂತೆ ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ ಹೇಳಿರುವುದು ಇದನ್ನು ಪುಷ್ಠಿಕರಿಸುವಂತಿದೆ ಎಂದು ಕೋರ್ಟ್ ಹೇಳಿದ್ದು, ಪ್ರಾಥಮಿಕ ಶಾಲೆಯಲ್ಲಿ ಕಲಿಸಲು ಡಿಎಡ್ ಅರ್ಹತೆ ಹೊರತೂ ಬಿಎಡ್ ಅಲ್ಲವೆಂದು ಸರ್ಕಾರದ ಅಧಿಸೂಚನೆ ರದ್ದು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read