ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ರಸ್ತೆಯಲ್ಲಿ ಕಾದು ಕುಳಿತಿದ್ದರು. ಲಾರಿ ಬರುತ್ತಿದ್ದಂತೆ ತಡೆದು ನಿಲ್ಲಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿ ಮೂರು ಟನ್ ಗೂ ಅಧಿಕ ಗೋಮಾಂಸವಿರುವುದು ಗೊತ್ತಾಗಿದೆ.
ಇದರಿಂದ ರೊಚ್ಚಿಗೆದ್ದ ಜನರು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸುವಷ್ಟರಲ್ಲಿ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.