HomeCrimeBIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ

BIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ನಡೆದಿದೆ.

ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು ಹಿಂದೂಪುರದಿಂದ ಬೆಂಗಳೂರಿನತ್ತ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ರಸ್ತೆ ಮಧ್ಯೆ ತಡೆದಿದ್ದಾರೆ. ಅಲ್ಲದೇ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 7 ವಾಹನಗಳಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ. ಅದನ್ನು ನಾವು ತಡೆದಿದ್ದೇವೆ. ಗೋಮಾಂಸ ಸಾಗಿಸುತ್ತಿದ್ದರೂ ಪೊಲೀಸರು ಮೌನವಾಗಿರುವುದೇಕೆ? ಸರ್ಕಾರಕ್ಕೆ ಗೊತ್ತಿಲ್ಲವೇ? ಸರ್ಕಾರ ಏನು ಮಾಡುತ್ತಿದೆ? ಎಂದು ಶ್ರೀರಾಮಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular