HomeKarnatakaBIG NEWS: ಗೋಮಾಂಸ ಸಾಗಾಟ ತಡೆದು ವಾಹನಕ್ಕೆ ಬೆಂಕಿ ಪ್ರಕರಣ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

BIG NEWS: ಗೋಮಾಂಸ ಸಾಗಾಟ ತಡೆದು ವಾಹನಕ್ಕೆ ಬೆಂಕಿ ಪ್ರಕರಣ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ಬೆಂಗಳೂರಿಗೆ ಗೋಮಾಂಸವನ್ನು ಗೂಡ್ಸ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ವೇಳೆ ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ಈ ವೇಳೆ ಗೋಮಾಂಸ ಸಾಗಾಟ ಮಾಡುತ್ತಿದ್ದವರು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ರೊಚ್ಚಿಗೆದ್ದ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಗೋಮಾಂಸ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಗೋಮಾಂಸ ಸಾಗಾಟ ಮಾಡುತ್ತಿದ್ದವನ ಎದೆಗೆ ಒದ್ದಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶ ಮಾಡಿದ್ದಾರೆ. ಪ್ರಕರಣ ಸಂಬಂಧ ಶ್ರೀರಾಮಸೇನೆಯ ಹಲವು ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular