ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋಗಿದ್ದಾಗ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘೋರ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂದನೂರಿನಲ್ಲಿ ನಡೆದಿದೆ.
ಲಾಲ್ ಸಾಬ್ ಪಟೇಲ್ (19) ಮೃತ ವಿದ್ಯಾರ್ಥಿ. ಸ್ನೇಹಿತರ ಜೊತೆ ಭೀಮಾ ನದಿಯಲ್ಲಿ ಈಜಲು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತುಯಲ್ಲಿ ಘಟನೆ ನಡೆದಿದೆ.

