ದಾವಣಗೆರೆ: ಬಿಯರ್ ಬಾಕ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಬಿದ್ದಿರುವ ಘಟನನೆ ದಾವಣ್ಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ.
ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ ಬಾಟಲಿಗಳನ್ನು ಮತ್ತೊಂದು ಲಾರಿಗೆ ವರ್ಗಾಯಿಸಿದರು. ಪರಿಸ್ಥಿತಿಯ ಲಾಭ ಪಡೆದ ಸ್ಥಳೀಯರು ಕೆಲ ಬಿಯರ್ ಬಾಕ್ಸ್‌ಗಳನ್ನು ಹೊತ್ತೊಯ್ದಿದ್ದಾರೆ ಎನ್ನಾಲಾಗಿದೆ.

