ಮನೆ ಮನೆಗೂ ಮದ್ಯ ಭಾಗ್ಯ : ‘ಕರ್ನಾಟಕ’ ಇನ್ಮುಂದೆ ‘ಕುಡುಕರ ತೋಟ’ : H.D ಕುಮಾರಸ್ವಾಮಿ ಲೇವಡಿ

ಬೆಂಗಳೂರು : ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಹಲವು ವಿಚಾರಗಳ ಬಗ್ಗೆ ಕುಹುಕವಾಡಿದ ಹೆಚ್ಡಿಕೆ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು! ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ!! ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ. ಇದುಸರಕಾರದ ಸಂಕಲ್ಪ ಎಂದಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!! ಎಂದು ಕುಹಕವಾಡಿದ್ದಾರೆ.

ಖೊಟ್ಟಿ ಗ್ಯಾಟಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ?3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ.

ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

https://twitter.com/hd_kumaraswamy/status/1705818086518280529

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read