HomeLatest Newsಅಪಾರ್ಟ್ ಮೆಂಟ್ ನ ಇಂಗು ಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ನಾಪತ್ತೆಯಾದವರ ಮಾಹಿತಿ ಸಂಗ್ರಹ

ಅಪಾರ್ಟ್ ಮೆಂಟ್ ನ ಇಂಗು ಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ನಾಪತ್ತೆಯಾದವರ ಮಾಹಿತಿ ಸಂಗ್ರಹ

ಬೆಂಗಳೂರು: ಬೆಂಗಳೂರಿನ ಬೇಗೂರು ಎಂ.ಎನ್.ಕ್ರೆಡೆನ್ಸ್ ಪ್ಲೋರಾ ಅಪಾರ್ಟ್ ಮೆಂಟ್ ನ ಇಂಗು ಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗೂರು ಸೇರಿದಂತೆ ಸುತ್ತಮುತ್ತಲು ನಾಪತ್ತೆಯಾದವರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ಬೇಗೂರು ಠಾಣೆ ಸೇರಿದಂತೆ ಸುತ್ತಮುತ್ತಲ ಠಾಣೆಗಳ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಪ್ರಕರಣಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಜೂನ್ 16 ರಂದು ಪತ್ತೆಯಾಗಿರುವ ಅಸ್ಥಿಪಂಜರ ಮನುಷ್ಯನದ್ದೇ ಆಗಿದೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೂಲಂಕುಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.

ವ್ಯಕ್ತಿ ಎಷ್ಟು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗದು. ಆದರೆ ಬುರುಡೆ. ಮೂಳೆಗಳು, ಪ್ಯಾಂಟ್ ಪತ್ತೆಯಾಗಿದೆ. ಮೂಳೆಗಳನ್ನು ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆ ಬಳಿಕ ಮೃತನ ವಯಸ್ಸು ಹಾಗೂ ಇತರ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular