ಬಳ್ಳಾರಿ: ರಾಜ್ಯ ಸರ್ಕಾರದ ಜಾತಿ ಗಣತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹಿಂದೆ ಹಣ ಹೊಡೆಯುವ ಹಾಗೂ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಹುನ್ನಾರವಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮಲು ಆರೋಪಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆಗೆ ಬಜೆಟ್ ನಲ್ಲಿ 420 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ಈ ಹಿಂದೆ ಸಮೀಕ್ಷೆ ಹೆಸರಲ್ಲಿ ಹಣ ಹೊಡೆದವರು ಇದೀಗ ಮತ್ತೆ ಸಮೀಕ್ಷೆಗೆ ಕೋಟ್ಯಂತರ ಹಣ ಮೀಸಲಿಡಲಾಗಿದೆ. ದುಬಾರಿ ಸಮೀಕ್ಷೆಯ ಹಿಂದೆ ಸಿಎಂ ಸಿದ್ದರಾಮಯ್ಯ ದುಡ್ಡು ಹೊಡೆಯುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ 10 ವರ್ಷಗಳ ಹಿಂದೆ ಕಾಂತರಾಜ್ ಸಮಿತಿಯಿಂದ 150 ಕೋಟಿ ರೂಪಾಯಿ ಖರ್ಚು ಮಾಡಿ 54 ಪ್ರಶ್ನೆಗಳ ಸಮೀಕ್ಷೆ ನಡೆಸಲಾಗಿತ್ತು. ಅದು ಅವೈಜ್ಞಾನಿಕ ಎಂದು ಇದೀಗ 60 ಪ್ರಶ್ನೆಗಳ ಸಮೀಕ್ಷೆಗೆ ಸರ್ಕಾರ ಮುಂದಾಗಿದೆ. ಇದರ ಹಿಂದೆ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ.