HomeKarnatakaBIG NEWS: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರು ಪತ್ತೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಘಟನೆ

BIG NEWS: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರು ಪತ್ತೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಘಟನೆ

ಬೆಳಗಾವಿ: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರೊಂದು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು ವ್ಯಕ್ತಿಯೋರ್ವರ ಶವ ಕಾರಿನೊಳಗೆ ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಕಂಡುಬಂದಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಹೆಚ್ಚುವರಿ ಎಸ್ ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಇನ್ನು ಘಟನಾ ಸ್ಥಳಕ್ಕೆ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular