HomeLatest NewsBREAKING: ರೈತರ ಪ್ರತಿಭಟನೆಗೆ ಕರವೇ ಬೆಂಬಲ: ಬೆಳಗಾವಿಯಲ್ಲಿ ಹೆದ್ದಾರಿ ಬಂದ್ ಮಾಡಿ ಆಕ್ರೋಶ

BREAKING: ರೈತರ ಪ್ರತಿಭಟನೆಗೆ ಕರವೇ ಬೆಂಬಲ: ಬೆಳಗಾವಿಯಲ್ಲಿ ಹೆದ್ದಾರಿ ಬಂದ್ ಮಾಡಿ ಆಕ್ರೋಶ

ಬೆಳಗಾವಿ: ಬೆಳಗಾವಿಯ ಗುರ್ಲಾಪುರದಲ್ಲಿ ಒಂದೆಡೆ ಕಬ್ಬು ಬೆಳೆಗಾರರ ಪ್ರತಿಭಟನೆ, ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದೆ.

ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತ್ಭಟನೆ ನಡೆಸಿದ್ದಾರೆ. ಕರವೇ ಕಾರ್ಯಕರ್ತರು ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಕಬ್ಬು ಬೆಳೆಗಾರರಿಗೆ 3500 ರೂಪಾಯಿ ಬೆಣ್ಬಲ ಬೆಲೆ ನಿಗದಿ ಮಾಡಬೇಕು. ಎಲ್ಲಾ ರೈತರ ಸಂಕಷ್ಟ ಆಲಿಸುವಂತೆ ಒತ್ತಿಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular