ಬೆಳಗಾವಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ-ಮುರಗೋಡ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳಾದ ವಿಶಾಲ ಲಮಾಣಿ (20) ಮತ್ತು ಅಪ್ಪು ಲಮಾಣಿ (23) ಎಂದು ಗುರುತಿಸಲಾಗಿದೆ.
ಅಪಘಾತದ ಭೀಕರತೆಗೆ ತೀವ್ರ ರಕ್ತಸ್ರಾವದಿಂದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರುಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.